Labour Card Scholarship 2024: ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್‌ ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ನೀಡುತ್ತಿರುವ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬೇಕೆ..? ಯಾರು Labour Card Scholarship ಗೆ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವಾಗ..? ಹಾಗೂ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

Telegram Group Join Now
WhatsApp Group Join Now

ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. 2024-25 ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕಾರ್ಮಿಕ ಇಲಾಖೆಯ ವತಿಯಿಂದ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇದರ ಲಾಭ ಪಡೆದುಕೊಳ್ಳಬಹುದು.

ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ SSP ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 2024-25 ನೇ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ SSP ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.

ಅರ್ಹ ಕಟ್ಟಡ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಧನಸಹಾಯವನ್ನು SSP ವೆಬ್‌ಸೈಟ್‌ ಮೂಲಕ ಪಡೆದುಕೊಳ್ಳಲು https:kbocwwb.Karnataka.gov.in ಉಪಯೋಗಿಸಿಕೊಂಡು ಮಂಡಳಿಯ ವೆಬ್‌ಸೈಟ್‌ ನಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಆಧಾ‌ರ್ ಲಿಂಕ್(ಸೀಡ್) ಅನ್ನು ಮಾಡಿಕೊಳ್ಳಬೇಕು.

ವಿದ್ಯಾರ್ಥಿಗಳು SSP ವೆಬ್‌ಸೈಟ್‌ ಮೂಲಕ ಶೈಕ್ಷಣಿಕ ಧನಸಹಾಯವನ್ನು ಪಡೆಯಲು ಆಧಾರ್ ಸಂಖ್ಯೆಯನ್ನು ಲಿಂಕ್(ಸೀಡ್) ಮಾಡದೇ ಇರುವ ಕಟ್ಟಡ ಕಾರ್ಮಿಕರು ಕೂಡಲೇ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ನೋಂದಣಿ ಮಾಡಿ ಎನ್ ಪಿ ಸಿ ಐ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು.

2024-25 ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಮೀಸಲಿಟ್ಟಿರುವ ಅಯವ್ಯಯಕ್ಕೆ ಅನುಗುಣವಾಗಿ ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಗುವುದೆಂದು ಎಂದು ಮಂಡಳಿಯು ತಿಳಿಸಿದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 31-12-2024

Labour Card Scholarship 2024 ಪ್ರಮುಖ ಲಿಂಕ್‌ಗಳು:

ಅರ್ಜಿ ಸಲ್ಲಿಕೆ ಲಿಂಕ್:‌ Apply ಮಾಡಿ
ಆಧಾ‌ರ್ ಲಿಂಕ್ (ಸೀಡ್): Click Here
ಅಧಿಕೃತ ವೆಬ್‌ಸೈಟ್‌ಗಳು: kbocwwb.Karnataka.gov.in, ssp.karnataka.gov.in

ಇತರೆ ಮಾಹಿತಿಗಳನ್ನು ಓದಿ:

New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

Ration Card Correction 2024: ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರೀಯೆ ಆರಂಭ

Leave a Comment

error: Content is protected !!